September 13, 2026
Sunday, September 13, 2026
spot_img

ರಾಣೇಬೆನ್ನೂರಿನಲ್ಲಿ ದುರಂತ: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಹಸು ಸಾ*ವು

ಹೊಸದಿಗಂತ ವರದಿ ರಾಣೇಬೆನ್ನೂರು:

ವಿದ್ಯುತ್ ಕಂಬದಿಂದ ತಂತಿ ಕಡಿದು ನೆಲಕ್ಕೆ ಬಿದ್ದ ಪರಿಣಾಮ ಹುಲ್ಲು ಮೇಯಲು ತೆರಳಿದ್ದ ಹಸುವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಮಂಗಳವಾರದಂದು ನಡೆದಿದೆ.

ಗ್ರಾಮದ ಬಸಪ್ಪ ಹರಿಜನ ಅವರಿಗೆ ಸೇರಿದ ಹಸು ಹುಲ್ಲು ಮೇಯಲು ತೆರಳಿದ್ದ ವೇಳೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದೆ. ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಹಿನ್ನೆಲೆಯಲ್ಲಿ ಹಸುವಿಗೆ ವಿದ್ಯುತ್‌ ಶಾಕ್ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದೆ.

ಇದನ್ನೂ ಓದಿ:

ಘಟನೆಯಿಂದ ಹಸುವಿನ ಮಾಲೀಕರಿಗೆ ಆರ್ಥಿಕ ನಷ್ಟ ಉಂಟಾಗಿದ್ದು, ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ತೆರವುಗೊಳಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !