September 22, 2026
Tuesday, September 22, 2026
spot_img

ಅಪಘಾತ: ಗಾಯಾಳು ಮಾಜಿ ಸಚಿವ ರಮಾನಾಥ ರೈ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

ಹೊಸದಿಗಂತ ವರದಿ ಬಂಟ್ವಾಳ:

ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಚೇತರಿಸಿಕೊಂಡು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಎರಡು ದಿನಗಳ ಕಾಲ ಮಂಗಳೂರಿನ ಕೊಡಿಯಾಲ್ ಬೈಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಇದೀಗ ಆರೋಗ್ಯದಲ್ಲಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾಜ್ ಆಗಿ‌ ಬಂಟ್ವಾಳದ ಕಳ್ಳಿಗೆಯಲ್ಲಿರುವ ತಮ್ಮ ನಿವಾಸಕ್ಕಾಗಮಿಸಿದ್ದಾರೆ.

ವಾರಗಳ ಕಾಲ ವಿಶ್ರಾಂತಿಯಲ್ಲಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಸಣ್ಣಪುಟ್ಟ ಗಾಯಗೊಂಡಿದ್ದ ಕಾರು ಚಾಲಕ ಮತ್ತು ಇನ್ನೋರ್ವ ಸಹಾಯಕ ಸೋಮವಾರವೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಅಪ್ತಸಹಾಯಕ ಡೆಂಜಿಲ್ ಅವರಿಗೆ ಕಾಲಿನ ಭಾಗಕ್ಕೆ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀಮೋಹನದಾಸ್ ಸ್ವಾಮೀಜಿ, ಸಂಸದರು, ಮಾಜಿ ಸಂಸದರು, ಶಾಸಕರು ಸೇರಿದಂತೆ ಪಕ್ಷ ಬೇಧ ಮರೆತು ಎಲ್ಲಾ ಪಕ್ಷಗಳ ಮುಖಂಡರು, ಕಾರ್ಯಕರ್ತರು ತಂಡೋಪತಂಡವಾಗಿ ಆಸ್ಪತ್ರೆಗೆ ಅಗಮಿಸಿ ರಮಾನಾಥ ರೈ ಅವರ ಆರೋಗ್ಯ ವಿಚಾರಿಸಿದರೆ ಖುದ್ದು ಸಿಎಂ ಅವರು ಕರೆ ಮಾಡಿ ರೈ ಆರೋಗ್ಯವನ್ನು ವಿಚಾರಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !