November 24, 2026
Tuesday, November 24, 2026
spot_img

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಯನಾಡು ಬಳಿ ಅಪಘಾತ: ಯುವಕ ಸಾ*ವು

ಹೊಸದಿಗಂತ ವರದಿ ಮಡಿಕೇರಿ:

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಯನಾಡು ಬಳಿ ನಡೆದ ಕಾರು ಅಪಘಾತದಲ್ಲಿ ಯುವಕನೊಬ್ಬ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಬೆಂಗಳೂರಿನ ನಾಗದೇವನಹಳ್ಳಿ ನಿವಾಸಿ ಪ್ರಸನ್ನ ಎಂಬವರ ಪುತ್ರ ಎನ್.ಪಿ.ದೀಕ್ಷಿತ್ (22) ಎಂಬವರೇ ಸಾವಿಗೀಡಾದವರು.

ಸೋಮವಾರ ಸಂಜೆ ಮಡಿಕೇರಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿರುವುದಾಗಿ ಹೇಳಲಾಗಿದೆ.

ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರ ಪೈಕಿ ದೀಕ್ಷಿತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಸಾವಿಗೀಡಾಗಿದ್ದು, ಇತರ ಮೂವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ‌ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Must Read