ಉದನೆ ಬಳಿ ಅವಘಡ: ಪ್ರಪಾತಕ್ಕೆ ಬಸ್ ಉರುಳಿ ಚಾಲಕ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಎಂಜಿರದಲ್ಲಿ ಇಂದು ನಸುಕಿಗೆ ನಡೆದಿದೆ.

ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಈ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!