ಅಯೋಧ್ಯೆಯಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ: ಸಂತ್ರಸ್ತರಿಗೆ ನೆರವಾಗುವಂತೆ ಸಿಎಂ ಯೋಗಿಗೆ ಕರೆ ಮಾಡಿದ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ಮಿನಿ‌ ಬಸ್‌ ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಏಳು ಜನರು ಮೃತಪಟ್ಟು 9 ಜನರು ಗಾಯಗೊಂಡಿದ್ದಾರೆ.
ಈ ಘಟನೆ ಕುರಿತು ತಿಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇತ್ತ ಅಪಘಾತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ ಪ್ರವಾಸಿಗರ ಸುರಕ್ಷತೆ, ಅವರಿಗೆ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಕುರಿತಂತೆ ಈಗಾಗಲೇ ತಾವು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಗಾಯಾಳುಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವ ಜೊತೆಗೆ ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!