ಜೀಪ್‌-ಟ್ರಕ್ ನಡುವೆ ಭೀಕರ ಅಪಘಾತ: 6 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವೇಗವಾಗಿ ಬಂದ ಟ್ರಕ್ ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

ಪಾದ್ಘಾದಿಂದ ಖಡವಲಿ ರೈಲು ನಿಲ್ದಾಣದ ಕಡೆಗೆ ಸಾಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ನಡೆದ ವೇಳೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!