ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಹಾವೇರಿ ಪಟ್ಟಣದ ಅಶ್ವಿನಿ ನಗರದ ನಿವಾಸಿಗಳಾಗಿದ್ದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದರು. ಮಧ್ಯರಾತ್ರಿ 12.30ರ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ.
ಸುರೇಶ್ (45), ಐಶ್ವರ್ಯ (22), ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಮೀಳಾ (28) ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.