ಹೊಸದಿಗಂತ ಡಿಜಿಟಲ್ ಡೆಸ್ಕ್ :
ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಪತ್ನಿ ಹಾಗೂ ನಟಿ ಪಲ್ಲವಿ ಜೋಶಿ (Pallavi Joshi)ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ.
ದಿ ವ್ಯಾಕ್ಸಿನ್ ವಾರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅವರು ಅವಘಡದಲ್ಲಿ (Accident) ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿತ್ರೀಕರಣವನ್ನು ಸ್ಥಗಿತಗೊಳಿಸಿದ್ದಾರೆ.
ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವ ಪಲ್ಲವಿ ಜೋಶಿ ಅವರು ಚಿತ್ರೀಕರಣಕ್ಕೆ ಬಂದಾಗ, ಕಾರು ಅಪಘಾತವಾಗಿ ಗಾಯಗೊಂಡಿದ್ದಾರೆ.