ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರದ ಗಾಳಿಪುರ ಬೈಪಾಸ್‌ನಲ್ಲಿ ಶನಿವಾರ ಸಂಭವಿಸಿದ ಲಾರಿ, ಕಾರು ಹಾಗೂ ದ್ವಿಚಕ್ರ ವಾಹನ ನಡುವಿನ ಭೀಕರ ಸರಣಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತರಲ್ಲಿ ಮೆರಾನ್ (10), ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್ ಸೇರಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದಲ್ಲಿ ಮೆರಾನ್ ಸ್ಥಳದಲ್ಲೇ ಮೃತಪಟ್ಟಿದ್ದ. ಉಳಿದ ಮೂವರು ಗಂಭೀರ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ರೆಹಾನ್, ಅದಾನ್ ಪಾಷಾ ಮತ್ತು ಫೈಜಲ್ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರಾದ ನಾಲ್ವರೂ ಸ್ನೇಹಿತರು ಈದ್ ಹಬ್ಬದ ಸಂಭ್ರಮದಲ್ಲಿ ಒಟ್ಟಾಗಿ ಸೇರಿ ಟಿವಿಎಸ್ ಎಕ್ಸ್‌ಎಲ್ ಬೈಕ್‌ನಲ್ಲಿ ಔಟರ್ ರಿಂಗ್ ರಸ್ತೆಗೆ ಬಂದಿದ್ದರು. ಈ ವೇಳೆ ವೇಗವಾಗಿ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಹಿಂದಿನಿಂದ ಬಂದ ಕಾರು ಕೂಡ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ನಡೆದಿದೆ. ಬೈಕ್‌ನಲ್ಲಿ ಸವಾರರಾಗಿದ್ದ ನಾಲ್ವರೂ ಸಹ ಹೆಲ್ಮೆಟ್ ಧರಿಸಿರಲಿಲ್ಲ. ತಲೆಗೆ ಗಂಭೀರ ಪೆಟ್ಟಾಗಿರುವುದರಿಂದ ಎಲ್ಲರೂ ಬಲಿಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಬೈಕ್ ನೀಡಿದ ಪೋಷಕರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿಮನೆ ಗ್ರಾಮದ ಬಳಿ ಮತ್ತೊಂದು ದುರಂತ ಸಂಭವಿಸಿದೆ. ಪ್ರವಾಸಿಗರನ್ನು ಹೊತ್ತ ಕಾರೊಂದು ನಿಯಂತ್ರಣ ತಪ್ಪಿ ತುಂಗಾ ನದಿಗೆ ಬಿದ್ದಿದ್ದು, ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಶೃಂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕವನ್ನು ಖಚಿತಪಡಿಸಿದೆ.