Accident | ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ: ಸವಾರ ಸಾವು

ಹೊಸದಿಗಂತ ವರದಿ , ಮಂಡ್ಯ :

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಎಸ್.ಎಂ. ಶಂಕರ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಜ್ಯೂಸ್ ಅಂಗಡಿ ಇಟ್ಟುಕೊಂಡಿದ್ದ ಅಭಿಷೇಕ್ (25) ಎಂಬಾತನೇ ಮೃತಪಟ್ಟ ಬೈಕ್ ಸವಾರ.

ಕಾರ್ಯನಿಮಿತ್ತ ಮೈಸೂರಿಗೆ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ಅಭಿಷೇಕ್ ಕೆಲಸ ಮುಗಿಸಿಕೊಂಡು ವಾಪಸ್ಸು ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ.

ಮೂಲತಃ ಕುಣಿಗಲ್‌ನವನೆನ್ನಲಾದ ಅಭಿಷೇಕ್‌ಗೆ ಮದುವೆ ನಿಶ್ಚಿಯವಾಗಿತ್ತು. ದುರಾದೃಷ್ಟ ಮದುವೆಗೂ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಯ್ಯನ್‌ಗೌಡ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂದ ಮದ್ದೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!