ದಿಗಂತ ವರದಿ ವಿಜಯಪುರ:
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭ ಬೈಕ್- ಲಾರಿ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ವಿಜಯಪುರ ತಾಲೂಕಿನ ಕಗ್ಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸೋಮವಾರ ನಡೆದಿದೆ.
ಇಲ್ಲಿನ ಕುಮಟಗಿ ತಾಂಡಾದ ನಿವಾಸಿ ವೆಂಕು ಚವ್ಹಾಣ (43) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಮೃತ ವೆಂಕು ಚವ್ಹಾಣ ಪುತ್ರಿಯರಾದ ಐಶ್ವರ್ಯ, ಪ್ರೀತಿ ಹಾಗೂ ಪಕ್ಕದ ಮನೆ ಬಾಲಕಿ ಶ್ವೇತಾ ರಾಠೋಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಜಯಪುರ ತಾಲೂಕಿನ ಕುಮಟಗಿ ತಾಂಡಾದಿಂದ ಕಗ್ಗೋಡದ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.