Sunday, October 1, 2023

Latest Posts

ಪುಣೆಯಲ್ಲಿ ಸ್ಕೂಟರ್​ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ: ಮಂಗಳೂರು ಮೂಲದ ದಂತವೈದ್ಯೆ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪುಣೆಯ ಪಿಂಪ್ರಿಯ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ದಂತ ವೈದ್ಯೆ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾ ನಿವಾಸಿ ಡಾ. ಜೈಶಾ ( 27) ಮೃತಪಟ್ಟವರು. ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದರು. ಮಂಗಳೂರಿನಲ್ಲಿ ನೆಲೆಸಿದ್ದ ಇವರನ್ನು ಪುಣೆಯ ಉದ್ಯಮಿ ರಿಮಿನ್ ಆರ್ ಕುರಿಯಾಕೋಸ್ ಅವರಿಗೆ ಒಂದೂವರೆ ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಇವರು ಮಂಗಳೂರಿನ ಜಾನ್ ಥಾಮಸ್ ಮತ್ತು ಉಷಾ ಜಾನ್ ದಂಪತಿಯ ಪುತ್ರಿಯಾಗಿದ್ದಾರೆ.
ಜೈಶಾ ಅವರು ಸ್ಕೂಟರ್​ನಲ್ಲಿ ಪುಣೆಯ ಪಿಂಪ್ರಿಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಕ್ಲಿನಿಕ್‌ಗೆ ಹೋಗುತ್ತಿದ್ದ ವೇಳೆ ಅವರು ಸಂಚರಿಸುತ್ತಿದ್ದ ಸ್ಕೂಟರ್​ಗೆ ಟ್ರಕ್ ಡಿಕ್ಕಿ ಹೊಡೆದಿದೆ‌.‌ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ‌.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!