ಲಾರಿ ಮತ್ತು ಓಮಿನಿ ವ್ಯಾನ್ ನಡುವೆ ಅಪಘಾತ, ಮಹಿಳೆ ಸಾವು

ಹೊಸದಿಗಂತ ವರದಿ ಅಂಕೋಲಾ: 

ಲಾರಿ ಮತ್ತು ಓಮಿನಿ ವ್ಯಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃತ ಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಹೊನ್ನಾಳಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಹನಾ ಶ್ಯಾನಭಾಗ(43) ಅಪಘಾತದಲ್ಲಿ ಮೃತ ಮಹಿಳೆಯಾಗಿದ್ದು, ಮದುವೆ ಸಮಾರಂಭಕ್ಕೆ ಯಲ್ಲಾಪುರದಿಂದ ಅಂಕೋಲಾಗೆ ಬರುವಾಗ ಅಪಘಾತ ಸಂಭವಿಸಿದೆ.

ಓಮಿನಿ ವಾಹನಕ್ಕೆ ಹೊನ್ನಾಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಅಚ್ಚ್ಯುತ ಶಾನಭಾಗ ಅವರ ಹೆಣ್ಣು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಂಕೋಲಾ ಪಿ.ಎಸ್.ಐ ಮಹಾಂತೇಶ ಮತ್ತು ಸಿಬ್ಬಂದಿ ಭೇಟಿ ನೀಡಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿ, ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!