ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕನಾಯಕನಹಳ್ಳಿಯ ರಾಮಘಟ್ಟ ಗ್ರಾಮದಲ್ಲಿ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, 200 ಕೋಳಿ, 100 ಕುರಿ ಹಾಗೂ ಆರು ಹಸುಗಳು ಮೃತಪಟ್ಟಿವೆ.
ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣವೇ ಬೆಂಕಿ ಎಲ್ಲೆಡೆ ವ್ಯಾಪಿಸಿದೆ. ಪ್ರಾಣಿಗಳು ಸುಟ್ಟು ಕರಕಲಾಗಿವೆ. ರೈತ ಚೇತನ್ ಕುಮಾರ್ ಎನ್ನುವವರಿಗೆ ಸೇರಿದ ಕೊಟ್ಟಿಗೆ ಇದಾಗಿದ್ದು, ಸಾಕು ಪ್ರಾಣಿಗಳ ಕಳೇಬರ ನೋಡಿ ಕುಟುಂಬದವರು ಕಣ್ಣೀರಿಟ್ಟಿದ್ದಾರೆ.