ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಕಾರ್ಕಳದ ಸಿಡಿಮದ್ದು ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಎಂಬಲ್ಲಿ ಈ ಘಟನೆ ನಡೆದಿದ್ದು, ಹಲವು ದಶಕಗಳಿಂದ ಸಿಡಿಮದ್ದು ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿದೆ. ಇಂದು ಬೆಳಗ್ಗೆ ಸ್ಫೋಟದ ಪರಿಣಾಮವಾಗಿ ಮೂವರು ಗಾಯಗೊಂಡಿದ್ದಾರೆ.
ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ತಯಾರು ಮಾಡಲಾಗುತ್ತಿದ್ದು, ಆದರೆ ಸ್ಫೋಟದ ತೀವ್ರತೆಗೆ, ಕಟ್ಟಡದ ಮೇಲ್ಛಾವಣಿಯು ಸಂಪೂರ್ಣವಾಗಿ ನಾಶವಾಗಿದೆ.
ಗಾಯಗೊಂಡವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾರ್ಕಳ ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.