ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರುದುನಗರ ಜಿಲ್ಲೆಯ ಶಿವಕಾಶಿ ಸಮೀಪದ ನಾರಾಯಣಪುರಂ ಪುದೂರಿನ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಶನಿವಾರ ಸ್ಫೋಟ ಸಂಭವಿಸಿದೆ.
ಬೆಂಕಿ ಅವಘಡದಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.