ದಿಲ್ಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಿಲ್ಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಗೃಹ ಸಚಿವಾಲಯದ ಕಚೇರಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ರೈಸಿನಾ ಹಿಲ್ಸ್‌ ಪ್ರದೇಶದಲ್ಲಿರುವ ನಾರ್ತ್‌ ಬ್ಲಾಕ್‌ನ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡವು ಆಂತರಿಕ ವ್ಯವಹಾರಗಳ ಸಚಿವಾಲಯ ಮತ್ತು ಮಾನವ ಸಂಪನ್ಮೂಲ ಸಚಿವಾಲಯವನ್ನು ಹೊಂದಿದೆ. ಬೆಳಗ್ಗೆ 9:22ರ ಸುಮಾರಿಗೆ ಈ ಘಟನೆ ನಡೆದಿದೆ.

ಮೂಲಗಳ ಪ್ರಕಾರ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿಯನ್ನು ತ್ವರಿತವಾಗಿ ಹತೋಟಿಗೆ ತರಲಾಯಿತು.

ಘಟನೆಯ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಟ್ಟಡದಲ್ಲಿ ಇರಲಿಲ್ಲ. ಆದಾಗ್ಯೂ, ಮೂಲಗಳ ಪ್ರಕಾರ, ಬೆಂಕಿಯ ಸಂದರ್ಭದಲ್ಲಿ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹವಾನಿಯಂತ್ರಣಗಳು, ಕಂಪ್ಯೂಟರ್‌ಗಳು, ದಾಖಲೆಗಳು ಮತ್ತು ಪೀಠೋಪಕರಣಗಳಿಗೆ ಹಾನಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!