ನಾರಿನ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ: ಸುಮಾರು 6 ಲಕ್ಷ ಮೌಲ್ಯದ ನಾರು ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರಿನ ನಾರು ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾರ್ಖಾನೆ ಸಂಪೂರ್ಣ ಸುಟ್ಟು ಕರಕಲಾಗಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ತಿಮ್ಮಾಪುರ ಗ್ರಾಮದ ನಾರು ಉತ್ಪಾದನಾ ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಜಯಣ್ಣ ಅವರ ಒಡೆತನದ ಫೈಬರ್ ಕಾರ್ಖಾನೆ ಇದಾಗಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಮಾರು 6 ಲಕ್ಷ ಮೌಲ್ಯದ ನಾರು ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಕಿಬ್ಬನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!