ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ: ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೀಠೋಪಕರಣ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಕೋಟ್ಯಂತರ ರೂ. ಮೌಲ್ಯದ ಪೀಠೋಪಕರಣಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದಿದೆ.

ರಾತ್ರಿ 8:30ಕ್ಕೆ ಅಂಗಡಿ ಮಾಲೀಕರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರು. ರಾತ್ರಿ 9.30ರ ಸುಮಾರಿಗೆ ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ನೆರೆಹೊರೆಯವರು ನೋಡಿ ಮಾಲೀಕ ಶಿವರಾಜನ್‌ಗೆ ಕರೆ ಮಾಡಿ ವಿಷಯ ತಿಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ವಾಹನ ಬಂದಾಗ ಅಂಗಡಿಯಲ್ಲಿದ್ದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದ್ದು, ಬೆಂಕಿ ದೊಡ್ಡಮಟ್ಟದಲ್ಲಿ ವ್ಯಾಪಕವಾಗಿತ್ತು.

ಎರಡು ಅಗ್ನಿಶಾಮಕ ವಾಹನಗಳಲ್ಲಿ ಬಂದ ಸಿಬ್ಬಂದಿ ಅಕ್ಕಪಕ್ಕದಲ್ಲಿರೋ ಫರ್ನಿಚರ್ಸ್ ಅಂಗಡಿಗಳಿಗೆ ಬೆಂಕಿ ತಗುಲದಂತೆ ಎಚ್ಚರವಹಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!