ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಲಾಲ್ ಬಾಗ್ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ರಸ್ತೆಯ ಮೇಲೆ ಹೊತ್ತಿ ಉರಿದ ಕಾರು ಈ ವೇಳೆ ಕಾರಿನ ಪಕ್ಕದಲ್ಲಿದ್ದ ನಿಂತಿದ್ದ ಬೈಕ್ ಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದೆ.
ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬಸವನಗುಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.