ಚಲಿಸುತ್ತಿದ್ದ ವಾಹನದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಾರು

ಹೊಸದಿಗಂತ ವರದಿ ವಿಜಯಪುರ:

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಕಾರು ಹೊತ್ತಿ ಉರಿದಿರುವ ಘಟನೆ ನಗರದ ಇಟ್ಟಂಗಿಹಾಳ ಕ್ರಾಸ್ ಬಳಿ‌ ನಡೆದಿದೆ.

ಕಾರಿನಲ್ಲಿ ಐವರು ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ವೇಳೆ ಅಗ್ನಿ ಅವಗಢ ಸಂಭವಿಸಿದ್ದು  ಕ್ಷಣಾರ್ಧದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ.

ಕಾರಿನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡ ಕೂಡಲೇ ಕಾರಿನಲ್ಲಿದ್ದವರು ಹೊರಬಂದು ಅವಗಢದಿಂದ ಪಾರಾಗಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ರಿಜಿಸ್ಟ್ರೇಷನ್ ಹೊಂದಿರುವ ಆಲ್ಟೋ ಕಾರು ಬೆಂಕಿಗಾಹುತಿಯಾಗಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!