ಸಿಲಿಕಾನ್ ಸಿಟಿಯಲ್ಲಿ ನಿಂತಿದ್ದ ಬಸ್ ಗಳಲ್ಲಿ ಆಕಸ್ಮಿಕ ಬೆಂಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಸಿಲಿಕಾನ್ ಸಿಟಿಯಲ್ಲಿ ನಿಂತಿದ್ದ ಬಸ್ ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್‍ಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಮೈಸೂರು ರಸ್ತೆಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಪಾರ್ಕ್ ಮಾಡಿದ್ದ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ.
ಬಸ್‍ಗಳು SRS ಟ್ರಾವೆಲ್ಸ್ ಗೆ ಸೇರಿದ್ದಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!