ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನ ಕಾಲೇವಾಡಿ ಪ್ರದೇಶದ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ದಟ್ಟವಾದ ಹೊಗೆಯು ಗೋಡೌನ್ ಸುತ್ತ ಆವರಿಸಿರುವುದನ್ನು ಕಾಣಬಹುದಾಗಿದೆ.
ಬೆಂಕಿ ಅನಾಹುತಕ್ಕೆ ಕಾರಣವೇನು ಮತ್ತು ಹಾನಿಯ ಪ್ರಮಾಣ ತಕ್ಷಣಕ್ಕೆ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ