ಆಕಸ್ಮಿಕ ಬೆಂಕಿ ಅವಘಡ: ಬೋನಿನಲ್ಲಿದ್ದ ಚಿರತೆ ಸಾವು

ಹೊಸ ದಿಗಂತ ವರದಿ,ತಿಪಟೂರು:

ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷದಿಂದ 4 ವರ್ಷದ ವನ್ಯಜೀವಿ ಚಿರತೆ ಬೆಂಕಿಗೆ ಬಲಿಯಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಅರಣ್ಯ ಇಲಾಖೆ ಮದ್ಲೇಹಳ್ಳಿ ಗ್ರಾಮದ ಸರ್ವೇ ನಂಬರ್ 10ರಲ್ಲಿ ನಾರಾಯಣಪ್ಪ ಬಿನ್ ಶಂಕರಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಹಿಡಿಯಲು ಬೋನ್ ಇಡಲಾಗಿತ್ತು. ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಚಿರತೆ ಸೆರೆಯಾಗಿದೆ.
ಆದರೆ ಮಧ್ಯಾಹ್ನ 12.00 ಗಂಟೆಯ ಸಮಯದಲ್ಲಿ ಈ ಪ್ರದೇಶದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಉಂಟಾಗಿ ಬೋನಿನಲ್ಲಿದ್ದ ಚಿರತೆ ಹೊರ ಬರಲಾಗದೆ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಿಬ್ಬನಹಳ್ಳಿ ಪೊಲೀಸ್ ಸಿಬ್ಬಂದಿ ಸಿದ್ದಲಿಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿರತೆ ಮರಣೋತ್ತರ ಪರೀಕ್ಷೆಯನ್ನು ಕುಪ್ಪಾಳು ಹಿರಿಯ ಪಶುವೈದ್ಯಾಧಿಕಾರಿ ಡಾ.ರಂಗನಾಥ್ ನಡೆಸಿದ್ದಾರೆ. ಘಟನೆ ನಡೆದು ಸುಮಾರು ಗಂಟೆಗಳು ಕಳೆದರೂ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಬಾರದೇಯಿದ್ದು ಕಾರಣ ಸಾರ್ವಜನಿಕರು ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ರಾತ್ರಿ ಕಳೆದರೂ ಕಿಬ್ಬನಹಳ್ಳಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿರುವುದಿಲ್ಲ..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!