ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ ಜಿಂದಾಲ್ ಫ್ಯಾಕ್ಟರಿ ಬೈಪಾಸ್ ರಸ್ತೆ ಬಳಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಘಟನೆಯಲ್ಲಿ ಆಟೋಮೊಬೈಲ್ ಶಾಪ್, ಎಲೆಕ್ಟ್ರಿಕಲ್ ಹಾಗೂ ಹೋಟೆಲ್ ಬೆಂಕಿಗಾಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಸಿಕ್ಕು ಅಂಗಡಿಯಲ್ಲಿನ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಎಲೆಕ್ಟ್ರಿಕ್ ಬ್ಯಾಟರಿಗಳು, ಎಲೆಕ್ಟ್ರಿಕ್ ವಸ್ತುಗಳು ಹಾಗೂ ಹೋಟೆಲ್‌ನ ಫ್ರಿಜ್, ಟೇಬಲ್, ಚೇರ್ ಸೇರಿ ಅಂದಾಜು 30 ಲಕ್ಷದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಬೆಂಕಿ ನಿರಂತರವಾಗಿ ಉರಿಯುತ್ತಿದ್ದು, ದಟ್ಟ ಹೊಗೆ ಆವರಿಸಿದ್ದರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವಷ್ಟರಲ್ಲಿ ಮೂರೂ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.