ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಹಾರಿದ ಗುಂಡು: ಯುವಕನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ, ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಮೂಡುಶೆಡ್ಡೆ ಸೆಕೆಂಡ್ ಹ್ಯಾಂಡ್ ವಸ್ತುಗಳ ಮಾರಾಟ ಮಳಿಗೆಯಲ್ಲಿ ಈ ಘಟನೆ ನಡೆದಿದೆ . ಗಾಯಾಳುವನ್ನು ಸಫ್ವಾನ್ (25) ಎಂದು ಗುರುತಿಸಲಾಗಿದೆ.

ಪರವಾನಗಿ ಹೊಂದಿರುವ ಪಿಸ್ತೂಲ್‍ನಿಂದ ಗುಂಡು ಸಿಡಿದಿದೆ ಎಂದು ತಿಳಿದು ಬಂದಿದೆ. ಪಿಸ್ತೂಲ್ ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಹಾರಿದೆ ಎಂದು ಶಂಕಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸಫ್ವಾನ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿ ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!