SHOCKING | ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸೋರಿಕೆ: ನಾಲ್ವರು ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜಿಲ್ಲೆಯ ರಾಜಾಜಿನಗರದಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.

ಮಹಾದೇವ ದಿಂಡವಾರ ಎಂಬುವರ ಮನೆಯಲ್ಲಿಸಿಲಿಂಡರ್ ಅನಿಲ ಸೋರಿಕೆಯಿಂದ ಹೊತ್ತಿಕೊಂಡ ಬೆಂಕಿ ಇಡೀ ಮನೆ ವ್ಯಾಪಿಸಿದೆ. ಘಟನೆಯಲ್ಲಿ ಮಹಾದೇವ ಸಂಕೇತ, ಮಣಿಕಂಠ ರಾಮು ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯೊಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮನೆಯ ವಸ್ತುಗಳು ಹಾನಿಯಾಗಿವೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!