ಹೊಸದಿಗಂತ ಡಿಜಿಟಲ್ ಡೆಸ್ಕ್:
ಘಾಜಿಯಾಬಾದ್ ಜಿಲ್ಲೆಯ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ಮನೆಯೊಂದರಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಏಳು ತಿಂಗಳ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಯನ್ನು ನಂದಿಸಲಾಗಿದ್ದು, ಮಹಿಳೆ ಮತ್ತು ಮಗು ಸೇರಿದಂತೆ ಇಬ್ಬರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ನ ಹೆಚ್ಚುವರಿ ಪೊಲೀಸ್ ಆಯುಕ್ತ ದಿನೇಶ್ ಕುಮಾರ್ ಪಿ ತಿಳಿಸಿದ್ದಾರೆ.
ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಅವರು, ತಡರಾತ್ರಿ (ಜೂನ್ 12) ಲೋಣಿ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಜನರು ಸಿಲುಕಿರುವ ಬಗ್ಗೆ ನಮಗೆ ಮಾಹಿತಿ ಬಂದಿತು. ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿತು.
ಘಟನೆಯ ಕುರಿತು ಹೆಚ್ಚಿನ ವಿವರ ನೀಡಿದ ದಿನೇಶ್ ಪಿ, ”ಒಬ್ಬ ಮಹಿಳೆ ಮತ್ತು ಮಗುವಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನೆಲ ಮಹಡಿಯಿಂದ ಮೇಲಿನ ಮಹಡಿಗೆ ಬೆಂಕಿ ವ್ಯಾಪಿಸಿದೆ. ಮೊದಲ ಮತ್ತು ಎರಡನೇ ಮಹಡಿಯಲ್ಲಿದ್ದ ಜನರು ಈ ಘಟನೆಯಲ್ಲಿ ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅವರಲ್ಲಿ ಮಕ್ಕಳು, ವಯಸ್ಕರು ಮತ್ತು ಏಳು ತಿಂಗಳ ಮಗುವೂ ಸೇರಿದೆ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿದ್ದಾರೆ.” ಎಂದು ತಿಳಿಸಿದ್ದಾರೆ.