ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಹೊಳೆ ಆನ್ವೇರಿ ಗ್ರಾಮದಲ್ಲಿ ಆಕಸ್ಮಿಕವಾಗಿ ಗುಡಿಸಲು ಮನೆಗೆ ಬೆಂಕಿ ಹತ್ತಿದ ಪರಿಣಾಮ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಗ್ರಾಮದ ನಿಂಗಪ್ಪ ಪೂಜಾರ ಎಂಬುವವರಿಗೆ ಸೇರಿದ ಗುಡಿಸಲು ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ಹಣ, ಬಟ್ಟೆ ಸೇರಿದಂತೆ ಮೂರು ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ. ದೇವರ ಮುಂದೆ ಹಚ್ಚಿದ ದೀಪದ ಕೆಳಗಡೆ ಬಿದ್ದು ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದೆ.
ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.