ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಅಜಿತ್ ಪವಾರ್ ಈಗಾಗಲೇ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿ ,ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದೀಗ ಒಂದು ದಿನದ ಬಳಿಕ ಅಜಿತ್ ಪವಾರ್ ತಮ್ಮ ಸಹವರ್ತಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ, ಖಾತೆ ಹಂಚಿಕೆ ಮತ್ತು ಹೊಸ ಮೈತ್ರಿಗೆ ಸಂಬಂಧಿಸಿದ ಕಾನೂನು ಅಂಶಗಳ ಬಗ್ಗೆ ಚರ್ಚಿಸಿದ್ದಾರೆ .
ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಫಡ್ನವಿಸ್ ಅವರ ಅಧಿಕೃತ ನಿವಾಸ ‘ಮೇಘದೂತ್’ ಬಂಗಲೆಯಲ್ಲಿ ನಡೆದ ಸಭೆಯಲ್ಲಿ ಎನ್ಸಿಪಿ ನಾಯಕರಾದ ಸುನೀಲ್ ತಟ್ಕರೆ, ಪ್ರಫುಲ್ ಪಟೇಲ್ ಮತ್ತು ಛಗನ್ ಭುಜಬಲ್ ಕೂಡ ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ತನ್ನ ಬೆಂಬಲಿಗ ಶಾಸಕರ ಜೊತೆ ಸೇರಿ ಶಿವಸೇನಾ (ಶಿಂದೆ ಬಣ)-ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ ಎನ್ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಧ್ಯಾಹ್ನ ಉಪಮುಖ್ಯಮಂತ್ರಿಯಾಗಿ, ಇತರ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಸಭೆಯಲ್ಲಿ ಖಾತೆಗಳ ಹಂಚಿಕೆಯ ಬಗ್ಗೆ ಚರ್ಚೆ ನಡೆಸಲಾಗಿದ್ದು, ಎನ್ಸಿಪಿ, ಬಿಜೆಪಿ ಮತ್ತು ಶಿವಸೇನೆಯ ಹೊಸ ಮೈತ್ರಿ ಕುರಿಕು ಕಾನೂನು ಅಂಶಗಳು ಮತ್ತು ಮುಂಬರುವ ಸವಾಲುಗಳ ಬಗ್ಗೆಯೂ ನಾಯಕರು ಚರ್ಚಿಸಿದ್ದಾರೆ ಎಂದು ಅಜಿತ್ ಪವಾರ್ ಅವರ ಆಪ್ತ ಮೂಲಗಳು ತಿಳಿಸಿವೆ.