ಇನ್ನೂ ಖಾತೆ ಹಂಚಿಕೆಯಾಗಿಲ್ಲ, ಅದು ನಕಲಿ: ಕಾಂಗ್ರೆಸ್‌ನಿಂದ ಸ್ಪಷ್ಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಇಂದು ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಸಚಿವ ಸ್ಥಾನ ಹಂಚಿಕೆಯಾಗಿರುವಂತ ಪಟ್ಟಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ನಕಲಿ ಪಟ್ಟಿಯೆಂದು ಕಾಂಗ್ರೆಸ್ ಸ್ಪಷ್ಟ ಪಡಿಸಿದೆ.

ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಿದೆ ಎಂದು ತಿಳಿಸಿದೆ.

ಇಂದು ರಾಜಭವನದಲ್ಲಿ ನಡೆದಂತ ಸಮಾರಂಭದಲ್ಲಿ ಹಿರಿಯ ಕಾಂಗ್ರೆಸ್ ಶಾಸಕ ಹೆಚ್ ಕೆ ಪಾಟೀಲ್ ಸೇರಿದಂತೆ 24 ಮಂದಿ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅತ್ತ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎನ್ನುವಂತ ಖಾತೆ ಹಂಚಿಕೆ ಪಟ್ಟಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.

ಆದ್ರೇ ವೈರಲ್ ಆಗಿರುವಂತ ಪಟ್ಟಿ ಅಧಿಕೃತವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಖಾತೆ ಹಂಚಿಕೆಯ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿದು ಬಂದಿದೆ. ಈ ಮೂಲಕ ವೈರಲ್ ಆಗಿರುವಂತ ಖಾತೆ ಹಂಚಿಕೆಯ ಪಟ್ಟಿಯು ನಕಲಿಯಾಗಿದ್ದು, ಸತ್ಯಕ್ಕೆ ದೂರವಾಗಿರುವಂತ ಪಟ್ಟಿಯಾಗಿರುವುದಾಗಿ ತಿಳಿದು ಬಂದಿತ್ತು.

 

https://twitter.com/INCKarnataka/status/1662456878553788416?ref_src=twsrc%5Etfw%7Ctwcamp%5Etweetembed%7Ctwterm%5E1662456878553788416%7Ctwgr%5Ee0b33080b37e09b626dbea0b66a63306be54c623%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-dh71ad7b0a01d347d2a0a68e5f262fdb7d%2Fnaanuraajinaamekodtinienduelluhelillamlcbikehariprasaadhspashtane-newsid-n503900524

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!