Friday, February 3, 2023

Latest Posts

5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೆಕ್ಕ ಪರಿಶೋಧಕ ಲೋಕಾಯುಕ್ತರ ಬಲೆಗೆ

ಹೊಸದಿಗಂತ ವರದಿ, ವಿಜಯಪುರ:
5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಇಲ್ಲಿನ ಎಪಿಎಂಸಿಯಲ್ಲಿ ನಡೆದಿದೆ.
ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ ಈತ, ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ‌ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಈತನಲ್ಲಿ ಹೆಚ್ಚುವರಿಯಾಗಿ ಸಿಕ್ಕ 39 ಸಾವಿರ ರೂ. ಹಣ ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ.
ಲೋಕಾಯುಕ್ತ‌ ಎಸ್ಪಿ ಅನೀತಾ ಹದ್ದನ್ನವರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!