ಹೊಸದಿಗಂತ ವರದಿ ಹುಬ್ಬಳ್ಳಿ:
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಕೊಪ್ಪಳ ಕೈಗಾರಿಕಾ ಇಲಾಖೆ ಉಪನಿರ್ದೇಶಕ ಎಸ್. ಎಸ್. ಚೌವ್ಹಾಣ ಅವರ ಹುಬ್ಬಳ್ಳಿಯ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಬುಧವಾರ ಬೆಳಿಗ್ಗೆ ಇಲ್ಲಿಯ ರಾಜೀವನಗರದ ದತ್ತಾತ್ರೇಯ ಕಾಲೋನಿಯಲ್ಲಿರುವ ಮನೆ ಮೇಲೆ ಏಕಾಏಕಿ ದಾಳಿ ನಡೆಸಿದರು.
ಬಳಿಕ ಮನೆಯಲ್ಲಿ ದಾಖಲೆಗಳ ಪರಿಶೀಲಿಸಿದರು. ಈ ವೇಳೆ ೪ ಲಕ್ಷ ರೂ. ನಗದು ಹಾಗೂ ಅಪಾರ ಪ್ರಮಾಣದ ಬಂಗಾರ ಬೆಳ್ಳಿ ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.