ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಗೆ ಕಾಲಾವಕಾಶವನ್ನು ಸಿಬಿಐ ಪರ ವಕೀಲರು ಕೋರಿದ ಹಿನ್ನಲೆಯಲ್ಲಿ ಪ್ರಕರಣವನ್ನು ಫೆ.10ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಇಂದು ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ಕೈಗೊಂಡಿತು. ಈ ವೇಳೆ ಸಿಬಿಐ ಪರ ವಕೀಲರು ನ್ಯಾಯಪೀಠದ ಮುಂದೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ಫೆಬ್ರವರಿ 10ಕ್ಕೆ ಮುಂದೂಡಿಕೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐನಿಂದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!