ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಫೆಬ್ರವರಿ ಅಂತ್ಯದವರೆಗೆ ರವಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ.
ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು.
ತನಿಖೆಯ ವ್ಯಾಪ್ತಿಯನ್ನು ನಾವು ನಿರ್ಧರಿಸಬೇಕಾಗಿರುವುದರಿಂದ ಜಾರಿ ಕ್ರಮ ಕೈಗೊಳ್ಳದಿರಲು ಹೈಕೋರ್ಟ್ ನಿರ್ಧರಿಸಿದೆ.