ಆದಾಯಕ್ಕೂ ಮೀರಿ ಗಳಿಕೆ ಆರೋಪ; ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಲೋಕಾ ರೇಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆದಾಯಕ್ಕೂ ಮೀರಿದ ಗಳಿಗೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇಂದು  ಕರ್ನಾಟಕದ ಹಲವೆಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ.

ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಆ ಮೂಲಕ ಶಾಕ್ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಸದ್ಯ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದೆ.

ಬೆಂಗಳೂರಿನಲ್ಲಿ ಐಎಎಸ್​ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾ ದಾಳಿ ಮಾಡಿದೆ. ಆರ್​.ಟಿ.ನಗರದಲ್ಲಿರುವ ಹಿರಿಯ ಐಎಎಸ್ ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ಮಾಡಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದೆ. ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!