ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.

ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

7 ವರ್ಷಗಳ ಹಿಂದೆ ರಾಜ್‌ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಹಿಂದೂ ದೇವತೆಗಳು, ಹಿಂದೂ ಧರ್ಮದ ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ. ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಿದ್ದ. ಕ್ರಿಶ್ಚಿಯನ್‌ಗೆ ಮತಾಂತರವಾದ ಮೇಲೆ ಧರ್ಮಾಂದನಂತೆ ವರ್ತಿಸುತ್ತಿದ್ದ. ಹೀಗಾಗಿ, ಶಿವಕುಮಾರ ಸ್ವಾಮೀಜಿ ಮೂರ್ತಿಯನ್ನು ಒಡೆಯಲು ಪ್ಲಾನ್ ಮಾಡಿಕೊಂಡಿದ್ದ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!