ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ 65 ವರ್ಷದ ವೃದ್ಧ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.
ಮನೆಗೆಲಸದವನೇ ಮನೆಯ ಮಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.
ಮೃತ ಮಹಿಳೆಯ 27 ವರ್ಷದ ಪುತ್ರಿ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಿದ್ದು, ಘಟನೆ ಬಗ್ಗೆ ಆಕೆಗೆ ಮಾಹಿತಿ ಇರಲಿಲ್ಲ. ಭಾನುವಾರ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಿದ್ದಾರೆ. ವೃದ್ಧೆಯ ಮೇಲೆ ಹತ್ಯೆಗೆ ಮೊದಲು ಅತ್ಯಾಚಾರ ನಡೆದಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ದೇವರಾಜು (50) ತಮಿಳುನಾಡಿನ ಹೊಸೂರು ಮೂಲದವನಾಗಿದ್ದು, ಕಳೆದ ಎಂಟು ವರ್ಷಗಳಿಂದ ಮೃತ ಮಹಿಳೆಯ ಮನೆಯಲ್ಲಿ ಗೃಹಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕಾಲೋನಿಯ ಇತರ ಮನೆಗಳಲ್ಲಿಯೂ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ದೇವರಾಜು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ,ಬಳಿಕ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದಾನೆ. ಮೃತ ಮಹಿಳೆಯ ಕುತ್ತಿಗೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.



