Sunday, October 12, 2025

ಕೋರ್ಟ್ ನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೈದ ಆರೋಪಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಸಿಟಿ ಸಿವಿಲ್​ ಕೋರ್ಟ್​ಗೆ ವಿಚಾರಣೆಗೆ ಕರೆತಂದಿದ್ದ ವೇಳೆ ಆರೋಪಿ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಗೌತಮ್​ (35) ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಪ್ರಕರಣದ ವಿಚಾರಣೆಗೆಂದು ಪೊಲೀಸರು ಕರೆತಂದಿದ್ದರು. ಈ ವೇಳೆ ಮಹಡಿಯಿಂದ ಹಾರಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಿಲ್ಲ.

ಕಳೆದ ಏಪ್ರಿಲ್​ನಲ್ಲಿ ಆರೋಪಿ ಗೌತಮ್​ ವಿರುದ್ಧ ಬೆಂಗಳೂರಿನ ಆಡುಗೋಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಡಿಎನ್​ಎ ಪರೀಕ್ಷೆ ವೇಳೆ ಮ್ಯಾಚ್​ ಆಗಿದ್ದ ಹಿನ್ನಲೆ ಆರೋಪಿ ಬಂಧಿಸಿದ್ದ ಪೊಲೀಸರು, ಆತನ ವಿರುದ್ಧ ಚಾರ್ಜ್​ಶೀಟ್​ ದಾಖಲಿಸಿದ್ದರು. ಪ್ರಕರಣ ಸಂಬಂಧ ಇಂದಿನಿಂದ ಟ್ರಯಲ್ ನಡೆಯಲಿದ್ದ ಹಿನ್ನಲೆ ಗೌತಮ್​ನನ್ನು ಕೋರ್ಟ್​ ಗೆ ಕರೆತರಲಾಗಿತ್ತು. ಕುಟುಂಬದವರು ಆರೋಪಿಯ ಭೇಟಿಗೆ ಬಂದಿದ್ದ ಕಾರಣ, ಗೌತಮ್​ ಕೈಗೆ ಹಾಕಿದ್ದ ಬೇಡಿಯನ್ನ ಪೊಲೀಸರು ಕಳಚಿದ್ದರು. ಕುಟುಂಬಸ್ಥರ ಜೊತೆ ಮಾತನಾಡಿದ ಬಳಿಕ ಏಕಾಏಕಿಯಾಗಿ ನ್ಯಾಯಾಲಯದ 5ನೇ ಮಹಡಿಯಿಂದ ಗೌತಮ್​ ಜಿಗಿದಿದ್ದ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆತ ಅಂತಿಮವಾಗಿ ಉಸಿರು ಚೆಲ್ಲಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

error: Content is protected !!