ಹೊಸದಿಗಂತ ವರದಿ ಮಡಿಕೇರಿ:
ವ್ಯಕ್ತಿಯೊಬ್ಬ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿ ನಡೆದಿದೆ.
ಪೊನ್ನಂಪೇಟೆಯ ಬೇಗೂರು ಗ್ರಾಮದಲ್ಲಿ ಗುರುವಾರ ಅಪರಾಹ್ನ 2.30ರ ಸುಮಾರಿಗಡ ಈ ಘಟನೆ ನಡೆದಿದ್ದು, ಮೃತರನ್ನು ಕರಿಯ, ಗೌರಿ ನಾಗಿ ಹಾಗೂ ಆರು ವರ್ಷದ ಮಗು ಕಾವೇರಿ ಎಂದು ಗುರುತಿಸಲಾಗಿದೆ.
ಆರೋಪಿ ಗಿರೀಶ್ ಎಂಬಾತ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದ್ದು, ಸದ್ಯ ಆದ ತಲೆಮರೆಸಿಕೊಂಡಿದ್ದಾನೆ.
ನಾಗಿಯೊಂದಿಗೆ ಗಿರೀಶ್ ಮೂರನೇ ಮದುವೆಯಾಗಿ ತೋಟದ ಮನೆಯಲ್ಲೇ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿದ ಹಣದ ವಿಚಾರಕ್ಕಾಗಿ ನಾಲ್ವರ ನಡುವೆ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು, ಇದೇ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.
ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.