ಹೊಸದಿಗಂತ ಮಂಗಳೂರು:
ಕುಂದಾಪುರದ ಫೈನಾನ್ಶಿಯರ್ ಕೊಲೆ ಪ್ರಕರಣದ ಆರೋಪಿ ಅನುಪ್ ಶೆಟ್ಟಿ (38) ಉಡುಪಿ ಜಿಲ್ಲೆಯ ಹಿರಿಯಡ್ಕ ಸಬ್ ಜೈಲ್ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದ ಅನೂಪ್ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದ. ತಕ್ಷಣವೇ ಜೈಲು ಸಿಬ್ಬಂದಿಗಳು ಜೈಲಿನ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ಆದರೆ ದಾರಿ ಮಧ್ಯೆ ಆತ ಸಾವನ್ನಪ್ಪಿದ್ದಾನೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈತ ಕಳೆದ ಎರಡು ವರ್ಷಗಳಿಂದ ವಿಚಾರಣಾಧೀನ ಕೈದಿಯಾಗಿದ್ದಾನೆ. ಈತ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.
ಈ ಬಗ್ಗೆ ಜೈಲರ್ ನೀಡಿದ ದೂರಿನಂತೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.