ಹೊಸದಿಗಂತ ವರದಿ ಗದಗ :
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಶನಿವಾರ ಗಂಗಾಧರ ಶಿರೋಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಸಂಬಂಧಿಕರು ಭಾವನ ಮನೆಗಳು ಸೇರಿ ಆರು ಕಡೆ ದಾಳಿ ನಡೆಸಿದ್ದಾರೆ.
ಗದಗ ನಗರದ ಹುಡ್ಕೋ ಕಾಲೋನಿಯ ಗಂಗಾಧರ ಶಿರೋರ ಮನೆ ಸೇರಿದಂತೆ
ಗದಗ ನಗರದ ಅಳಿಯ ವಿಜಯ ಯಳಮೇಲಿ, ಭಾವ ನಾಗರಾಜ ಅಕ್ಕಿ, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಎಸ್. ಎಸ್. ಶೆಟ್ಟರ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಹನಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆದಿದ್ದು
ಲೋಕಾಯುಕ್ತ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.