ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಬಸವನಗುಡಿಯ ಬಿಐಟಿ ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಬೆಂಗಳೂರಿನ ವಿವಿ ಪುರಂ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ.
ಇದೇ ಅಕ್ಟೋಬರ್ 4ರಂದು ಬಸವನಗುಡಿಯ ಬಿಐಟಿ ಕಾಲೇಜಿಗೆ ಇ-ಮೇಲ್ ಮೂಲಕ ಆರೋಪಿಯು ಬಾಂಬ್ ಬೆದರಿಕೆ ಹಾಕಿದ್ದ. ಕಾಲೇಜು ಆವರಣದಲ್ಲೇ ಹೈಡ್ರೋಜನ್ ಸುಧಾರಿತ ಐಇಡಿ ಇಟ್ಟಿದ್ದು, ಅದನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ವಿವಿ ಪುರಂ ಪೊಲೀಸರು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಆರೋಪಿಯನ್ನ ಬಂಧಿಸಿದ್ದಾರೆ.