Friday, June 2, 2023

Latest Posts

ಪಾಕ್ ಏಜೆಂಟ್‌ಗೆ ಗೌಪ್ಯ ಮಾಹಿತಿ ನೀಡಿದ ಆರೋಪ: ಡಿಆರ್‌ಡಿಒ ವಿಜ್ಞಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನಿ ಏಜೆಂಟ್‌ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಅವರನ್ನು ಪುಣೆಯ ವಿಶೇಷ ನ್ಯಾಯಾಲಯ ಮಂಗಳವಾರ ಮೇ 29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್(ಡಿಆರ್‌ಡಿಒ) ಲ್ಯಾಬ್‌ವೊಂದರಲ್ಲಿ ನಿರ್ದೇಶಕರಾಗಿದ್ದ ಕುರುಲ್ಕರ್ ಅವರನ್ನು ಮೇ 3 ರಂದು ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ.

ವಿಚಾರಣೆಯ ಸಮಯದಲ್ಲಿ ಕುರುಲ್ಕರ್ ಅವರು ಅಧಿಕ ರಕ್ತದ ಸಕ್ಕರೆ ಮತ್ತು ಮನೆಯ ಆಹಾರದ ಸಮಸ್ಯೆಯಿರುವ ಕಾರಣ ಕೆಲವು ಔಷಧಿಗಳನ್ನು ಕೇಳಿದರು.ನ್ಯಾಯಾಲಯವು ಅವರಿಗೆ ಔಷಧಿಗಳನ್ನು ನೀಡಲು ಅನುಮತಿ ನೀಡಿತು.

ನ್ಯಾಯಾಲಯವು ಕುರುಲ್ಕರ್ ಅವರನ್ನು ಮುಂದಿನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!