ಪ್ರಚೋದನಕಾರಿ ಹೇಳಿಕೆ ಆರೋಪ.. ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣೇಶ ವಿಸರ್ಜನೆ ರ್ಯಾಲಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 21 ರಂದು ಪ್ರತಾಪ್ ಸಿಂಹ ಮಹಾಗಣಪತಿಯ ವಿಸರ್ಜನೆಗಾಗಿ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು. ಅವರು ಮುಸ್ಲಿಮರ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು.

ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು.

ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ದ್ವೇಷದ ಆರೋಪದ ಮೇಲೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!