Monday, November 3, 2025

ಆಕ್ಷೇಪಾರ್ಹ ಕಮೆಂಟ್ ಶೇರ್ ಆರೋಪ: ಶರಣ್ ಪಂಪ್‌ವೆಲ್‌ ಗೆ ಪೊಲೀಸ್ ಬುಲಾವ್


ಹೊಸದಿಗಂತ ವರದಿಮಂಗಳೂರು :

ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ರನ್ನು ವಿಚಾರಣೆಗೆ ಪೊಲೀಸ್ ಠಾಣೆ ಗೆ ಕರೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಕದ್ರಿ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಸಲಾಗಿದ್ದು, ಈಗಾಗಲೇ ಶರಣ್ ಪಂಪ್ ವೆಲ್ ಶೇರ್ ಮಾಡಿದ್ದ ಕಮೆಂಟ್ ಈಗಾಗಲೇ ಡಿಲೀಟ್ ಆಗಿದೆ. ವಿಕಾಸ್ ಎಂಬವರು ಹಾಕಿದ್ದ ಕಮೆಂಟ್ ಅನ್ನು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಕಮೀಷನರ್ ತಿಳಿಸಿದ್ದಾರೆ.

error: Content is protected !!