ಕಥೆ ಕದ್ದ ಆರೋಪ: ಮೈದಾನ್’ ಚಿತ್ರ ಪ್ರದರ್ಶನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಥೆಯನ್ನು ಕದ್ದಿರುವ ಆರೋಪದ ಮೇಲೆ ಬಾಲಿವುಡ್‌ ನಟ ಅಜಯ್‌ ದೇವಗನ್‌ ಪ್ರಧಾನ ಭೂಮಿಕೆಯಲ್ಲಿರುವ ‘ಮೈದಾನ್‌ʼ ಚಿತ್ರ ಬಿಡುಗಡೆಯ ವಿರುದ್ಧ ಪ್ರತಿಬಂಧಕಾದೇಶ ಮಾಡಿದ್ದ ಮೈಸೂರು ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ.

ಸಿನಿಮಾ ತಂಡಕ್ಕೆ ಇದರಿಂದ ಬಿಗ್‌ ರಿಲೀಫ್‌ ಸಿಕ್ಕಿದ್ದು, ನಿರ್ವಿಘ್ಞವಾಗಿ ಸಿನಿಮಾ ಪ್ರದರ್ಶನಕ್ಕೆ ಅಣಿ ಮಾಡಿಕೊಂಡಿದ್ದಾರೆ. ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ಆದೇಶ ಪ್ರಶ್ನಿಸಿ ಬಾಲಿವುಡ್‌ ನಿರ್ಮಾಪಕ ಬೋನಿ ಕಪೂರ್‌ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ನೇತೃತ್ವದ ವಿಶೇಷ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಸಿ ಆರ್‌ ಅನಿಲ್‌ ಕುಮಾರ್‌ ಮತ್ತು ಇತರರಿಗೆ ತುರ್ತು ನೋಟಿಸ್‌ ಜಾರಿ ಮಾಡಲಾಗಿದೆ. ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2024ರ ಏಪ್ರಿಲ್‌ 8ರಂದು ಮಾಡಿರುವ ಆದೇಶಕ್ಕೆ ಮುಂದಿನ ಆದೇಶದವರೆಗೆ ತಡೆ ತಡೆ ನೀಡಲಾಗಿದೆ” ಎಂದು ನ್ಯಾಯಾಲಯ ಆದೇಶ ಮಾಡಿದ್ದು, ವಿಚಾರಣೆಯನ್ನು ಏಪ್ರಿಲ್‌ 24ಕ್ಕೆ ಮುಂದೂಡಿದೆ.

ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಸಜನ್‌ ಪೂವಯ್ಯ ಅವರು ಆಕ್ಷೇಪಾರ್ಹವಾದ ತಾತ್ಕಾಲಿಕ ಪ್ರತಿಬಂಧಕಾದೇಶದಿಂದ ಜಗತ್ತಿನಾದ್ಯಂತ ಮತ್ತು ಒಟಿಟಿ ವೇದಿಕೆಗಳಲ್ಲಿ ಮೈದಾನ್‌ ಸಿನಿಮಾ ಬಿಡುಗಡೆಗೆ ತೊಡಕುಂಟಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!