ಗಾಂಜಾ ಸಂಗ್ರಹಿಸಿ ಇಟ್ಟಿದ್ದ ಆರೋಪಿ ಬಂಧನ: 16 ಕೆಜಿ ಗಾಂಜಾ ಜಪ್ತಿ

ಹೊಸದಿಗಂತ ವರದಿ, ವಿಜಯಪುರ

ಅಕ್ರಮವಾಗಿ ಗಾಂಜಾ ಬೆಳೆದು ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸುಮಾರು 16,500 ಮೌಲ್ಯದ 16 ಕೆಜಿ 500 ಗ್ರಾಂ ಹಸಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ವಿಜಯಪುರ ತಾಲೂಕಿನ ದ್ಯಾಬೇರಿ ಡಗೆ ವಸ್ತಿಯ ರಮೇಶ ರಾಜಾರಾಮ ತರಸೆ ಬಂಧಿತ ಆರೋಪಿ.

ರಮೇಶ ತರಸೆ ಈತ, ಜಮೀನಿನಲ್ಲಿ ಅಕ್ರಮವಾಗಿ ಬೆಳೆದ ಗಾಂಜಾ ಗಿಡಗಳನ್ನು ಕಿತ್ತಿ ಮನೆಯಲ್ಲಿ ಸಂಗ್ರಹಿಸಿ ಇಟ್ಟಿರುವ ಖಚಿತ ಮಾಹಿತಿ ಆಧರಿಸಿ, ಪೊಲೀಸರು ದಾಳಿ ನಡೆಸಿ, ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!