ಏಳು ಬೈಕ್ ಗಳ ಸಹಿತ ಪೊಲೀಸ್ ಬಲೆಗೆ ಬಿದ್ದ ಕಳವು ಆರೋಪಿ!

ಹೊಸದಿಗಂತ ವರದಿ ಮಡಿಕೇರಿ:

ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಅರಕಲಗೂಡು ತಾಲೂಕು ದಡ್ಡದಳ್ಳಿ ಗ್ರಾಮ ನಿವಾಸಿಯಾದ ಮಂಜು ಅಲಿಯಾಸ್ ಮಂಜುನಾಥ್ (25) ಎಂದು ಗುರುತಿಸಲಾಗಿದ್ದು, ಆರೋಪಿಯಿಂದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೊಡಗು ಜಿಲ್ಲೆಯ ಶನಿವಾರಸಂತೆ ಹಾಗೂ ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿರುವ ಬಂದ ದೂರಿನ ಅನ್ವಯ ಆರೋಪಿಗಳ ಪತ್ತೆಗಾಗಿ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್’ಪಿ ಆರ್‌.ವಿ.ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ಶನಿವಾರಸಂತೆ ಪೊಲೀಸ್ ಇನ್ಸ್‌ಪೆಕ್ಟರ್ ಎಸ್. ಪರಶಿವಮೂರ್ತಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ತಂಡ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!