ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಮಾನಯಾನ ಸಂಸ್ಥೆಗಳು ಮತ್ತು ಹೋಟೆಲ್‌ಗಳಿಗೆ ನಕಲಿ ಬಾಂಬ್ ಬೆದರಿಕೆಗಳ ಹಿಂದೆ ಇದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ಗೊಂಡಿಯಾ ಮೂಲದ ಜಗದೀಶ್ ಉಯ್ಕೆ (35) ಎಂದು ಗುರುತಿಸಲಾಗಿದೆ. ಆತ ವಿಮಾನಗಳಿಗೆ ಬಾಂಬ್ ಬೆದರಿಕೆ ಪ್ರಕರಣ ಹಿಂದೆ ಇದ್ದಾನೆ. ಆತ ಹಿಂದೆ ಭಯೋತ್ಪಾದನೆಯ ಬಗ್ಗೆ ಪುಸ್ತಕ ಬರೆದಿದ್ದ. ಅಲ್ಲದೇ 2021 ರಲ್ಲಿ ಪ್ರಕರಣ ಒಂದರಲ್ಲಿ ಬಂಧನಕ್ಕೊಳಗಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.